ಸುಬ್ರಹ್ಮಣ್ಯ : ಚಂದ್ರಗ್ರಹಣ ಹಿನ್ನೆಲೆಯಲ್ಲಿ ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಹಾಗೂ ಕಟ್ಟಿದ ದುರ್ಗಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತರಿಗೆ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.
ವರ್ಷದ ದ್ವಿತೀಯ ಹಾಗೂ ಕೊನೆಯ ಚಂದ್ರಗ್ರಹಣ ಅಕ್ಟೋಬರ್ 28ರಂದು ಸಂಭವಿಸಲಿದೆ. ಅಕ್ಟೋಬರ್ 28ರ ರಾತ್ರಿ ಆರಂಭವಾಗಿ, ಅಕ್ಟೋಬರ್ 29ರ ಮಧ್ಯರಾತ್ರಿ 2:24ಕ್ಕೆ ಮುಕ್ತಾಯವಾಗಲಿರುವ ಈ ಭಾಗಶಃ ಚಂದ್ರ ಗ್ರಹಣ ಭಾರತದಲ್ಲೂ ಗೋಚರಿಸುತ್ತದೆ.

ಕುಕ್ಕೆಶ್ರೀ ಸುಬ್ರಹ್ಮಣ್ಯದಲ್ಲಿ ರಾತ್ರಿಯ ಮಹಾಪೂಜೆ ಸಾಯಂಕಾಲ ಗಂಟೆ 6:30ಕ್ಕೆ ಮುಕ್ತಾಯವಾಗಲಿದ್ದು ಬಳಿಕ ದೇವರ ದರ್ಶನ ಇರುವುದಿಲ್ಲ. ರಾತ್ರಿ ಭೋಜನ ಇರುವುದಿಲ್ಲ ಸಾಯಂಕಾಲ ಆಶ್ಲೇಷಾ ಬಲಿ ಸೇವೆಯು ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತರಿಗೆ ದೇವಿಯ ದರ್ಶನ ಸಮಯ ಬದಲಾವಣೆ ಇಲ್ಲ. ರಾತ್ರಿಯ ಮಹಾಪೂಜೆ ಸಾಯಂಕಾಲ 6:30 ಒಳಗೆ ಮುಗಿಯುತ್ತದೆ. ಗ್ರಹಣದ ಸಮಯ ವಿಶೇಷ ಅಭಿಷೇಕ, ಮದ್ಯ ಕಾಲದಲ್ಲಿ ವಿಶೇಷ ಅಭಿಷೇಕ ಇರುತ್ತದೆ. ಗ್ರಹಣ ಸಮಯಕ್ಕೆ ದೇವಿಯ ದರ್ಶನಕ್ಕೆ ತುಪ್ಪ,ಎಣ್ಣೆ ಸಮರ್ಪಣೆಗೆ ಅವಕಾಶ ಇದೆ ಎಂದು ಕ್ಷೇತ್ರದ ಮೂಲಗಳು ತಿಳಿಸಿವೆ.