
ಸುಬ್ರಹ್ಮಣ್ಯದ ಡಾ. ರವಿಕಕ್ಕೆ ಪದವು ಮತ್ತು ಗೀತಾ ರವಿಕಕ್ಕೆಪದವು ಅವರ ಪುತ್ರನಾದ ಕೌಶಿಕ್ ಸುಬ್ರಹ್ಮಣ್ಯ ಅವರು ರಾಷ್ಟ್ರೀಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಇವರು ಕುಮಾರಸ್ವಾಮಿ ವಿದ್ಯಾಲಯದಲ್ಲಿ ಪ್ರೌಢ ಶಿಕ್ಷಣವನ್ನು ಮುಗಿಸಿ ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗವನ್ನು ಮಾಡುತ್ತಿದ್ದಾರೆ.

ಕಾಲೇಜಿನ ಕೌಶಿಕ್ ರವರ ತಂಡ ಶಟಲ್ ಬ್ಯಾಡ್ಮಿಂಟನ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ರಾಜಸ್ಥಾನದ ಜೋದ್ ಪುರದಲ್ಲಿ ಅ.25ರಿಂದ ಅ.28ವರೆಗೆ ನಡೆದ ರಾಷ್ಟ್ರೀಯ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ತಂಡದಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಕೌಶಿಕ್, ಅಖಿಲೇಶ್ ವರ್ಮ, ವಿಘ್ನೇಶ್ ಜಾಧವ್ ಭಾಗವಹಿಸಿದ್ದರು.ಇವರು ಇಲಾಖಾ ಮಟ್ಟದ ಸ್ಪರ್ಧೆಯಲ್ಲಿ ತಾಲೂಕು, ಜಿಲ್ಲಾ, ರಾಜ್ಯ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದ್ದರು.
ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ.