
ಸುಬ್ರಹ್ಮಣ್ಯ ಡಿ.12 : ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಯುಕ್ತ ಡಿಸೆಂಬರ್ 12ರಂದು ಲಕ್ಷ ದೀಪೋತ್ಸವ ಮತ್ತು ಕುಣಿತ ಭಜನಾ ಕಾರ್ಯಕ್ರಮವು ನಡೆದಿರುತ್ತದೆ.

ಈ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಡಾ.ರವಿ ಕಕ್ಕೆಪದವು ಸಮಾಜ ಸೇವ ಟ್ರಸ್ಟ್ ವತಿಯಿಂದ ರಸ್ತೆ ಮತ್ತು ರಥ ಬೀದಿಯನ್ನು ನೀರು ಹಾಕಿ ಗುಡಿಸಿ ಸ್ವಚ್ಛ ಮಾಡಲಾಯಿತು. ಈ ಸಮಾಜಮುಖಿ ಕಾರ್ಯಕ್ಕೆ ಊರವರಿಂದ ಹಾಗೂ ದೇವಸ್ಥಾನಕ್ಕೆ ಆಗಮಿಸಿದ ಭಕ್ತಾದಿಗಳಿಂದ ಮೆಚ್ಚುಗೆಯು ವ್ಯಕ್ತವಾಗಿದೆ.
