
ಮನವಿಗೆ ತುರ್ತಾಗಿ ಸ್ಪಂದಿಸುವ ಭರವಸೆ ನೀಡಿದ ಉಪಮುಖ್ಯಮಂತ್ರಿ.
ಕುಕ್ಕೆ ಸುಬ್ರಹ್ಮಣ್ಯ ಮಾ.26: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರಾರ್ಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿ 24*7 ವೈದ್ಯಕೀಯ ಸೇವೆ ಸೌಲಭ್ಯವಾಗುವಂತೆ ಮಾಡಬೇಕೆಂದು ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಕರ್ನಾಟಕ ಸರ್ಕಾರ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರಿಗೆ ಮಾರ್ಚ್ 26ರಂದು ಮನವಿ ನೀಡಲಾಯಿತು.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ನೀಡಲಾಗಿದ್ದು ಮಾನವಿ ಸ್ವೀಕರಿಸಿದ ಅವರು ಶೀಘ್ರವಾಗಿ ತುರ್ತುಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ರಾಜ್ಯದ ನಂಬರ್ ವನ್ ದೇವಸ್ಥಾನ ಆಗಿದ್ದರು ಈ ಭಾಗದಲ್ಲಿ ಸರಿಯಾದ ತುರ್ತು ಚಿಕಿತ್ಸೆಗೆ ವ್ಯವಸ್ಥೆ ಇಲ್ಲ. ಇಲ್ಲಿರುವ ಪ್ರಾರ್ಥಮಿಕ ಆರೋಗ್ಯ ಕೇಂದ್ರದಲ್ಲಿ ಸರಿಯಾದ ವ್ಯವಸ್ಥೆ ಹಾಗೂ ಸಿಬ್ಬಂದಿಗಳ ಕೊರತೆಯಿಂದ ತುರ್ತು ಚಿಕಿತ್ಸೆ ಸಿಗದೇ ಹಲವಾರು ಜನ ಪ್ರಾಣ ಕಳೆದುಕೊಳ್ಳುವಂತಾಗಿದೆ ಎಂಬ ವಿಷಯವನ್ನು ಡಿಸಿಎಂ ಗಮನಕ್ಕೆ ತರಲಾಯಿತು. ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕರಾದ ಡಾ. ರವಿ ಕಕ್ಕೆ ಪದವು, ಜಿಲ್ಲಾ ಪಂಚಾಯತ್ ಸದಸ್ಯರು ಸರಸ್ವತಿ ಕಾಮತ್, ಪದಾಧಿಕಾರಿಗಳು ಹಾಗೂ ಟ್ರಸ್ಟ್ ನ ಸದಸ್ಯರು ಉಪಸ್ಥಿತರಿದ್ದು ಮನವಿ ನೀಡಲಾಯಿತು.