ಅನಾರೋಗ್ಯದ ಹಿನ್ನೆಲೆ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು:ವೀಡಿಯೊ ಮೂಲಕ ಸ್ಪಷ್ಟನೆ ನೀಡಿದ ದತ್ತು ಪುತ್ರ.
ಸಾಲು ಮರದ ತಿಮ್ಮಕ್ಕ ಅವರು ಅನಾರೋಗ್ಯದ ಹಿನ್ನೆಲೆ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ.ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಅವರ ನಿಧನದ ಸುದ್ದಿ ಹರಿದಾಡುತ್ತಿದ್ದು, ಈ ಸಂಬಂಧ ಅವರ ದತ್ತು ಪುತ್ರ ಉಮೇಶ್ ವೀಡಿಯೊ ಹಂಚಿಕೊಂಡಿದ್ದು, ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಈ ಬಗ್ಗೆ ನಾಗರಾಜ್ ಹತ್ತೂರು ಎಂಬವರು ಸಹ ಫೇಸ್ಬುಕ್ನಲ್ಲಿ ಮಾಹಿತಿ ಹಂಚಿಕೊಂಡಿದ್ದು,ʼʼ ಸಾಲುಮರದ ತಿಮ್ಮಕ್ಕ ಆರೋಗ್ಯವಾಗಿದ್ದು, ವದಂತಿ ನಂಬಬೇಡಿʼʼ ಎಂದಿದ್ದಾರೆ.ಮೂರು ತಿಂಗಳ ಹಿಂದೆ ಅವರು ಬೆಂಗಳೂರಿನ ತಮ್ಮ ಮನೆಯಲ್ಲಿ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆದಿದ್ದರು. […]